ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಮುನ್ಸೂಚನೆಯ ಪ್ರಕಾರ ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ ಮತ್ತು ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ಇರುತ್ತದೆ.