ದಕ್ಷಿಣ ಭಾಗದಲ್ಲಿ ಕೋಲಾರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿದೆ.