July 11, 2026
Saturday, July 11, 2026
spot_img

WEATHER | ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಿಗೆ ಕಂಟಕ ತರಲಿದೆಯೇ ಬಿರುಗಾಳಿ ಸಹಿತ ಮಳೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ (IMD) ತಾಜಾ ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ. ಕಳೆದ ಕೆಲವು ದಿನಗಳಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಇಂದೂ ಕೂಡ ಮುಂದುವರಿಯುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್: ಭಾರಿ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ. ಕರಾವಳಿಯ ಬಹುತೇಕ ಎಲ್ಲ ತಾಲೂಕುಗಳಲ್ಲಿ ಸಿಡಿಲು ಮತ್ತು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಬಲವಾದ ಗಾಳಿ ಸಹಿತ ಮುಂಗಾರು ಮಳೆ ಸುರಿಯಲಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ಆರ್ಭಟ

ಉತ್ತರ ಒಳನಾಡಿನ ಹವಾಮಾನದಲ್ಲಿ ತೀವ್ರ ಏರುಪೇರಾಗಲಿದ್ದು, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಮಳೆಗಿಂತಲೂ ಹೆಚ್ಚಾಗಿ ಗಂಟೆಗೆ 40 ಕಿಮೀ ವೇಗದಲ್ಲಿ ಬೀಸಲಿರುವ ಚಂಡಮಾರುತ ಸದೃಶ ಗಾಳಿಯು ಈ ಭಾಗದ ಜನರನ್ನು ತಲ್ಲಣಗೊಳಿಸಲಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !