ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದ ನಡುವೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಏಪ್ರಿಲ್ 7ರವರೆಗೆ ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕೇವಲ ದಕ್ಷಿಣ ಒಳನಾಡಷ್ಟೇ ಅಲ್ಲದೆ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.



