WEATHER | ರಾಜ್ಯಾದ್ಯಂತ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಒಳಭಾಗವು ವ್ಯಾಪಕವಾದ ಮಳೆಯಾಗುವ ಸಾಧ್ಯತೆ, ಉತ್ತರ ಒಳಭಾಗ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುತ್ತದೆ. ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಜತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಕೆಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ.

ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!