Friday, September 12, 2025

WEATHER | ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆ, ಕರ್ನಾಟಕದ 29 ಜಿಲ್ಲೆಗಳಿಗೆ ಅಲರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇವಲ ಬೆಂಗಳೂರು ಮಾತ್ರವಲ್ಲ ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಯಲ್ಪಾಡು, ಆಗುಂಬೆ, ಜಿಕೆವಿಕೆ, ಕೃಷ್ಣರಾಜಪೇಟೆ, ಹೊಸಕೋಟೆ, ಗೌರಿಬಿದನೂರು, ಧರ್ಮಸ್ಥಳ, ಹೆಸರಘಟ್ಟ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕೋಟಾ, ಕಾರ್ಕಳ, ಬೀದರ್, ಭಾಗಮಂಡಲದಲ್ಲಿ ಮಳೆಯಾಗಿದೆ.

ಇದನ್ನೂ ಓದಿ