Friday, February 3, 2023

Latest Posts

ಮದುವೆಯ ದಿಬ್ಬಣ ಕಾರು ಪಲ್ಟಿ: ತಾಯಿ-ಮಗು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರಿನಿಂದ ಕಾಸರಗೋಡಿಗೆ ಹೋಗುವ ಅಂತಾರಾಜ್ಯ ರಸ್ತೆಯಲ್ಲಿ ಪರಪ್ಪೆ ಬಳಿ ಮದುವೆಯ ದಿಬ್ಬಣದೊಂದಿಗೆ ಹೋಗುತ್ತಿದ್ದ ಇನೋವಾ ಕಾರೊಂದು ಸ್ಕಿಡ್ ಆಗಿ ಮಗುಚಿ ಬಿದ್ದು, ಕಾರಿನಲ್ಲಿದ್ದ ಸುಳ್ಯ ಮೂಲದ ತಾಯಿ ಮತ್ತು ಮಗು ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಗಾಳಿಮುಖ ಸಮೀಪ ಗೋಳಿದಡಿಯ ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಅವರ 3 ವರ್ಷದ ಮಗು ಶಜಾ ಮೃತಪಟ್ಟಿದ್ದಾರೆ.

ಇನೋವಾ ಕಾರಲ್ಲಿದ್ದ ಇತರ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತರಲಾಗಿದೆ.

ಅಪಘಾತವಾದ ಸ್ಥಳದಲ್ಲಿ ಕೇಬಲ್ ಹಾಕಲು ಗುಂಡಿ ತೋಡಿದ್ದು ಈ ಭಾಗದಲ್ಲಿ ಒಂದು ವಾಹನ ಮಾತ್ರ ಸಂಚಾರ ಮಾಡಲು ಅವಕಾಶವಿದ್ದು ಮಳೆ ಇದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

ಗಡಿ ಪ್ರದೇಶವಾದುದರಿಂದ ಕರ್ನಾಟಕ ಮತ್ತು ಕೇರಳ ಎರಡೂ ಕಡೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!