ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ಸಿದ್ಧಾರ್ಥ್ ಮತ್ತು ಕಿಯಾರಾ ಮದುವೆಗೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.
ಈಗಾಗಲೇ ಗಣ್ಯರಿಗೆ ಮದುವೆಗೆ ಬರಲು ಆಹ್ವಾನ ನೀಡಲು ಶುರುವಾಗಿದ್ದು, ಆದರೂ ಮದುವೆ ಬಗ್ಗೆ ಯಾವುದೇ ಅಪ್ಡೇಟ್ ಬಿಟ್ಟು ಕೊಡದೇ ಸೈಲೆಂಟ್ ಆಗಿದ್ದಾರೆ.
ಸಾಕಷ್ಟು ವರ್ಷಗಳಿಂದ ಸಿದ್ಧಾರ್ಥ್ ಮತ್ತು ಕಿಯಾರಾ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. 2023ರ ಫೆಬ್ರವರಿಯಲ್ಲಿ ಈ ಜೋಡಿ ಮದುವೆಯಾಗುತ್ತಿದ್ದಾರೆ.
ಅಧಿಕೃತವಾಗಿ ತಮ್ಮ ಮದುವೆಯ ಬಗ್ಗೆ ಸಿದ್, ಕಿಯಾರಾ ಹೇಳದೇ ಇದ್ದರೂ ಸದ್ಯಕ್ಕೆ ನಿರ್ಮಾಪಕ ಕರಣ್ ಜೋಹರ್ ಮತ್ತು ನಿರ್ಮಾಪಕಿ ಅಶ್ವಿನಿ ವರ್ಧಿ ಅವರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಿದ್ದಾರಂತೆ. ಎರಡು ಕಡೆಯಿಂದ 100 ಜನರಿಗೆ ಮಾತ್ರ ಮದುವೆಗೆ ಹಾಜರಾಗಲಿದ್ದಾರೆ.
ಜೈಸಲ್ಮೇರ್ ಪ್ಯಾಲೇಸ್ನಲ್ಲಿ ಮದುವೆ ನಡೆಯುತ್ತಿದೆ. ಫೆ.4 ಮತ್ತು 5ರಂದು ಸಂಗೀತ್ ಮತ್ತು ಮೆಹೆಂದಿ ಕಾರ್ಯಕ್ರಮ ನಡೆಯಲಿದೆ. ಫೆ.6ರಂದು ಗುರುಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ಸಿದ್ಧಾರ್ಥ್, ಕಿಯಾರಾ ಮದುವೆ ನಡೆಯಲಿದೆ ಎಂದು ತಿಳಿದು ಬಂದಿದೆ.