Sunday, April 11, 2021

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 50 ಜನರಲ್ಲಿ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಬುಧವಾರ 50 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 36 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 16, ಭದ್ರಾವತಿ 08, ಶಿಕಾರಿಪುರ 02, ತೀರ್ಥಹಳ್ಳಿ 06, ಸೊರಬ 02, ಸಾಗರ 11, ಹೊಸನಗರ 04 ಹಾಗೂ ಹೊರ ಜಿಲ್ಲೆಯ 01 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 332 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 9 ವಿದ್ಯಾರ್ಥಿಗಳಲ್ಲಿ ಸೋಕು ಪತ್ತೆಯಾಗಿದೆ. 2483 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 96 ಜನ, ಖಾಸಗಿ ಆಸ್ಪತ್ರೆಯಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದು, 197 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss