Wednesday, July 6, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 895 ಮಂದಿಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………..

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಬುಧವಾರ 895 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 875 ಜನರಿಗೆ ಸಂಪರ್ಕದ ಮೂಲಕ ವೈರಸ್ ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 542 ಮಂದಿ ಸೋಂಕುಮುಕ್ತರಾದರು. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 22,056 ಜನರಿಗೆ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 20,960 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. ರಾಜ್ಯದಲ್ಲಿ 17,761 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ಮಲಪ್ಪುರಂ ಜಿಲ್ಲೆಯಲ್ಲಿ 3631, ತೃಶೂರು 3005, ಕಲ್ಲಿಕೋಟೆ 2400, ಎರ್ನಾಕುಳಂ 2397, ಪಾಲಕ್ಕಾಡು 1649, ಕೊಲ್ಲಂ 1462, ಆಲಪ್ಪುಳ 1461, ಕಣ್ಣೂರು 1179, ತಿರುವನಂತಪುರ 1101, ಕೋಟ್ಟಾಯಂ 1067, ಕಾಸರಗೋಡು 895, ವಯನಾಡು 685, ಪತ್ತನಂತ್ತಿಟ್ಟ 549, ಇಡುಕ್ಕಿ ಜಿಲ್ಲೆಯಲ್ಲಿ 375 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಮಧ್ಯೆ ಕೇರಳದಲ್ಲಿ ಕೊರೋನಾ ವೈರಸ್ ಬಾಧಿಸಿ ಬುಧವಾರ 131 ಮಂದಿ ಅಸುನೀಗಿದರು. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 16,457 ಜನರು ಮರಣ ಹೊಂದಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss