ಹೊಸ ದಿಗಂತ ವರದಿ, ಯಾದಗಿರಿ:
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಏ.14 ರ ಬುಧವಾರ 18 ಜನರು ಸಂಪೂರ್ಣ ಚೇತರಿಸಿಕೊಂಡಿದ್ದು, ಒಟ್ಟಾರೆ ಇಲ್ಲಿಯವರೆಗೆ 10,806 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 58 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,209 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 341 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.