ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ತೆರವು: ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೊರೋನಾ ಮಾರ್ಗಸೂಚಿಗಳ ಬದಲಾವಣೆ, ವೀಕೆಂಡ್ ಕರ್ಫ್ಯೂ ಕುರಿತ ನಿರ್ಧಾರಗಳನ್ನು ಕೈಗೊಳ್ಳಲು ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆದಿದೆ.

ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಸಭೆಯಲ್ಲಿ ಭಾಗಿಯಾಗಿದ್ದು, ವೀಕೆಂಡ್ ಕರ್ಫ್ಯೂ ನಿರ್ಧಾರ ಹಿಂಪಡೆಯಲಾಗಿದೆ. ನಾಳೆಯಿಂದಲೇ ಈ ನಿಯಮ ಜಾರಿಗೆ ಬರಲಿದೆ.

ಸಭೆ- ಸಮಾರಂಭಗಳ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಹಳೆಯ ನಿಯಮಗಳು ಮುಂದುವರಿಯಲಿವೆ. ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು. ನೈಟ್ ಕರ್ಫ್ಯೂ ವಿಚಾರದಲ್ಲಿಯೂ ಯಾವುದೇ ಬದಲಾವಣೆ ಇಲ್ಲ.
ವಿದೇಶದಿಂದ ಬೆಂಗಳೂರಿಗೆ ಆಗಮಿಸುವ ವಿದೇಶಿಯರ ಮೇಲೆಯೂ ತೀವ್ರ ನಿಗಾ ಇರಿಸಲಾಗುವುದು ಜೊತೆಗೆ ಲಸಿಕೆ ಪ್ರಮಾಣವನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೊಸ ಮಾರ್ಗಸೂಚಿಗಳನ್ನು ಸರ್ಕಾರ ಶೀಘ್ರವೇ ಬಿಡುಗಡೆಗೊಳಿಸಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!