spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ವೀಕೆಂಡ್ ಕರ್ಫ್ಯೂ: ಏನಿರತ್ತೆ? ಏನಿರಲ್ಲ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಇಂದು ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿ ಇರಲಿದೆ.

ಏನಿರುತ್ತೆ? ಏನಿರಲ್ಲ?

  • ವೈದ್ಯಕೀಯ ಸೇವಾ ವಲಯ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ.
  • ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಕಟ್ಟುನಿಟ್ಟಿನ ನಿಷೇಧ.
  • ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
  • ಅಗತ್ಯ ವಸ್ತುಗಳ ಉತ್ಪಾದನೆಯ ಎಲ್ಲಾ ಕೈಗಾರಿಕೆಗಳು, ಸಂಸ್ಥೆಗಳಿಗೆ ಅವಕಾಶ
  • ಎಲ್ಲಾ ಕೇಂದ್ರ-ರಾಜ್ಯ ಸರ್ಕಾರದ ಕಚೇರಿಗಳು, ಕೋವಿಡ್ ಸಂಬಂಧಿತ ಕೆಲಸ ಮಾಡುವ ಕಂಪನಿಗಳು ತೆರೆಯಲು ಅನುಮತಿ.
  • ರೈಲು ವಿಮಾನ ಸಂಚಾರಕ್ಕೆ ಅವಕಾಶ.
  • ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಐದು ಜನಕ್ಕೆ ಮಾತ್ರ ಅನುಮತಿ.
  • ಟೆಲಿಕಾಂ ಹಾಗೂ ಇಂಟರ್ ನೆಟ್ ಸರ್ವೀಸ್ ಪೂರೈಕೆದಾರರ ಓಡಾಟಕ್ಕೆ ಅವಕಾಶ
  • ರೋಗಿಗಳು, ಅವರ ಕುಟುಂಬಸ್ಥರು ಹಾಗೂ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳುವವರಿಗೆ ಸಂಬಂಧಪಟ್ಟ ಪ್ರೂಫ್ ತೋರಿಸಿ ಓಡಾಟಕ್ಕೆ ಅವಕಾಶ ನೀಡಲಾಗಿದೆ.
  • ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ
- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss