ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿಯಿಂದಲೇ ಎಲ್ಲೆಡೆ ಪೊಲೀಸರು ರಸ್ತೆಗಿಳಿದು ಜನರಿಗೆ ಎಚ್ಚರಿಕೆ ನೀಡಿದರು.
ಇನ್ನು ವೀಕೆಂಡ್ ಕರ್ಫ್ಯೂ, ಸಂಕ್ರಾಂತಿ ಹಬ್ಬ ಇರುವ ಕಾರಣ ಬೆಳಗ್ಗೆಯೇ ತಮ್ಮ ಊರುಗಳನ್ನು ತಲುಪಲು ರೈಲ್ವೆ ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಜಂಗುಳಿ ಸೇರಿತ್ತು. ಮಹಾಮಾರಿ ನಡುವೆ ಇಂದು ರಾಜ್ಯಾದ್ಯಂತ ಸಂಕ್ರಾಂತಿ ಹಬ್ಬದ ಸಡಕರ ಮನೆ ಮಾಡಿದೆ. ಬಹುತೇಕ ಕಡೆಗಳಲ್ಲಿ ಶುಕ್ರವಾರವೇ ಸಂಕ್ರಾಂತಿ ಆಚರಿಸಿದರೆ ಮತ್ತೆ ಕೆಲವರು ಇಂದು ಆಚರಿಸುತ್ತಿದ್ದಾರೆ. ಶುಕ್ರವಾರ ರಾತ್ರಿ 9:30ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಎಲ್ಲಾ ಅನಗತ್ಯ ಸೇವೆಗಳು, ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿಸಲಾಗಿದೆ. ವೀಕೆಂಡ್ ಕರ್ಫ್ಯೂ ನಡುವೆ ಹಬ್ಬದ ನೆಪದಲ್ಲಿ ಅನಗತ್ಯವಾಗಿ ರಸ್ತೆಗಿಳಿದರೆ ವಾಹನಗಳನ್ನು ಪೊಲೀಸರು ಸೀಜ್ ಮಾಡಲಿದ್ದಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.