Friday, June 2, 2023

Latest Posts

ವೀಕೆಂಡ್ ಕರ್ಫ್ಯೂ ಅಮಾನವೀಯ- ಅವೈಜ್ಞಾನಿಕ: ಪೊನ್ನಣ್ಣ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗಿನಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಅಮಾನವೀಯ ಹಾಗೂ ಅವೈಜ್ಞಾನಿಕ ಕ್ರಮ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಟೀಕಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದು ಬೆಳೆಗಾರರು ತಮ್ಮ ಫಸಲನ್ನು ಕಟಾವು ಮಾಡುವ ಸಮಯ. ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ಜೀವನೋಪಾಯಕ್ಕೆ ಮಾರಕವಾದಂತಹ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ವೀಕೆಂಡ್ ಕರ್ಫ್ಯೂ ಕೃಷಿ ಚಟುವಟಿಕೆಗಳಿಗೆ ಅನ್ವಯವಾಗದಂತೆ ತಕ್ಷಣ ಆದೇಶ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಯಾವುದೇ ವೈಜ್ಞಾನಿಕ ಹಿನ್ನೆಲೆ ಇಲ್ಲದೆ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಹಾಸ್ಯಾಸ್ಪದ ಕ್ರಮ. ಸರಕಾರ ಮತ್ತು ಜಿಲ್ಲಾಧಿಕಾರಿಗಳು ತಮ್ಮ ವಿವೇಚನೆಯನ್ನು ಬಳಸಿ ಕಾನೂನನ್ನು ಜನರ ಪರವಾಗಿ ಅಳವಡಿಸಬೇಕು. ಕಾಫಿ, ಕಾಳುಮೆಣಸು ಸೇರಿದಂತೆ ಇತರ ಯಾವುದೇ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಕೈಗೊಳ್ಳಬೇಕು. ಯಾವುದೇ ಮಾರ್ಗಸೂಚಿಯನ್ನು ಹೊರಡಿಸುವ ಮೊದಲು ಸರಕಾರ ಅಥವಾ ಜಿಲ್ಲಾಧಿಕಾರಿಗಳು ಕೃಷಿಕರಿಗೆ ಅನಾನುಕೂಲವಾಗದಂತೆ ನೋಡಕೊಳ್ಳಬೇಕೆಂದು ಪೊನ್ನಣ್ಣ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!