ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ವಿಧಿಸಿದ್ದು, ಬೆಂಗಳೂರಿನಲ್ಲಿ ಭಾನುವಾರ ವೀಕೆಂಡ್ ಕರ್ಪ್ಯೂ ನಿಯಮ ಉಲ್ಲಂಘಿಸಿದ 886 ವಾಹನಗಳನ್ನು ಜಪ್ತಿ ಮಾಡಲಾಗದೆ.
ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ 841 ಬೈಕ್, 20 ಆಟೋ, 25 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಶನಿವಾರ ಒಂದೇ ದಿನ 1,149 ವಾಹನಗಳನ್ನು ಸೀಜ್ ಮಾಡಿದ್ದರು.
ರಾಜ್ಯದಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಟಫ್ ರೂಲ್ಸ್ ಜಾರಿಗೆ ಬಂದಿದೆ. ನಿನ್ನೆ ಒಂದೇ ದಿನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 20,733 ಹೊಸ ಪ್ರಕರಣ ಪತ್ತೆಯಾಗಿದೆ.