ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹರಾಗುತ್ತಿದ್ದಂತೆಯೇ ಕುಸ್ತಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ. ಈ ಅಹಿತಕರ ಘಟನೆಗೆ ಪ್ರತಿಕ್ರಿಯಿಸಿದ ಹಿರಿಯ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಹೇಳಿಕೆಯು ನೆಟ್ಟಿಗರಿಗೆ ಸರಿ ಎನಿಸಿಲ್ಲ.
100 ಗ್ರಾಂ ಅಧಿಕ ತೂಕದ ಕಾರಣಕ್ಕಾಗಿ ಅನರ್ಹಗೊಳಿಸಿರುವುದು ವಿಚಿತ್ರವಾಗಿದೆ. ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ. ಇದು ನಮಗೆಲ್ಲರಿಗೂ ಪಾಠವಾಗಿದೆ. ಕಲಾವಿದರಿಗೆ, ಮಹಿಳೆಯರಿಗೆ ಇದು ಒಂದು ಪಾಠ. ವಿನೇಶ್ ಆದಷ್ಟು ಬೇಗ 100 ಗ್ರಾಂ ತೂಕ ಇಳಿಸಿಕೊಳ್ಳಲಿ. ಆದರೆ ಅವರಿಗೆ ಇನ್ನೊಂದು ಅವಕಾಶ ಸಿಗುವುದಿಲ್ಲ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.
ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಕೆಂಪು ಕಣ್ಣು ಬಿಟ್ಟಿದ್ದಾರೆ.