ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ನಡೆದ ವಕ್ಫ್ ತಿದ್ದುಪಡಿಯನ್ನು ಸ್ವಾಗತಿಸುತ್ತೇನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಓಲೈಕೆ ರಾಜಕಾರಣಕ್ಕಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಯಾವ ಜಮೀನನ್ನು ಬೇಕಾದರೂ ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಣೆ ಮಾಡಿಕೊಳ್ಳುವ ಅವಕಾಶ ಕೊಟ್ಟಿತ್ತು. ಇದರಿಂದ ರೈತರ ಜಮೀನು, ದೇವಸ್ಥಾನ, ಮಠ-ಮಂದಿರಗಳ ಆಸ್ತಿ ಎಲ್ಲ ಕಬಳಿಕೆ ಆಗುತ್ತಿತ್ತು ಎಂದರು.
ಆದರೆ ಈಗ ಎನ್ ಡಿಎ ಸರ್ಕಾರ ತಂದಿರುವ ತಿದ್ದುಪಡಿಯಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಮಠ, ಮಾನ್ಯಗಳ ಜಮೀನು ಸುರಕ್ಷಿತವಾಗಿ ಉಳಿಯಲಿದೆ. ಇದಕ್ಕಾಗಿ ಪ್ರಧಾನಮಂತ್ರಿಗಳಿಗೆ, ಕೇಂದ್ರ ಗೃಹ ಸಚಿವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.