ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿ ನಿರ್ಧಾರವನ್ನು ಸ್ವಾಗತ ಮಾಡ್ತೇನೆ. ಆದಷ್ಟು ಬೇಗ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನ ಭೇಟಿ ಮಾಡ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.
2024ರ ಲೋಕಸಭಾ ಚುನಾವಣೆಗೆ ಮೈತ್ರಿ (BJP-JDS Alliance) ವಿಚಾರವಾಗಿ ಮಾತನಾಡಿದ ಅವರು, ಮೈತ್ರಿಗೆ ಸ್ವಾಗತ ಮಾಡ್ತಿನಿ. ಜೆಡಿಎಸ್ 5 ಕ್ಷೇತ್ರಗಳಿಗೆ ಬೇಡಿಕೆಯಿಟ್ಟಿದೆ. ಆದ್ರೆ ಅಮಿತ್ ಶಾ (Amit Shah) ನಾಲ್ಕು ಕ್ಷೇತ್ರಗಳನ್ನ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಯಾವ ಕ್ಷೇತ್ರಗಳನ್ನ ಬಿಟ್ಟುಕೊಡಬೇಕು ಎನ್ನುವ ಬಗ್ಗೆ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಎಲ್ಲವೂ ಅವರಿಗೇ ಗೊತ್ತು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭವಾಗಿದೆ. ನಾನೂ ಕೂಡ ಸೆಪ್ಟೆಂಬರ್ 16ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ. ಕುರುಡುಮಲೈ ವಿನಾಯಕನ ಪೂಜೆ ಮಾಡಿ ಪ್ರವಾಸ ಆರಂಭಿಸ್ತೇವೆ, ಪ್ರತಿ ಜಿಲ್ಲೆಗಳಿಗೂ ಪ್ರವಾಸ ಮಾಡಿ ಜಾಗೃತಿ ಮೂಡಿಸುವ ಕೆಲಸ ಮಾಡ್ತೇವೆ ಅಂತ ತಿಳಿಸಿದ್ದಾರೆ.