Friday, December 8, 2023

Latest Posts

ಎನ್​ಡಿಎ ಕುಟುಂಬಕ್ಕೆ ಜೆಡಿಎಸ್​ಗೆ ಸ್ವಾಗತ: ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯ (Lok Sabha Election) ದೃಷ್ಟಿಯಿಂದ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಜೊತೆ ಮೈತ್ರಿಮಾಡಿಕೊಂಡಿದೆ .

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಾಮಾಜಿಕ ಮಾಧ್ಯಮ ‘ಎಕ್ಸ್​​​’ನಲ್ಲಿ ಪೋಸ್ಟ್​ ಮಾಡಿದ್ದು, ಎನ್​ಡಿಎ ಕುಟುಂಬಕ್ಕೆ ಜೆಡಿಎಸ್​ಗೆ ಹೃತ್ಪೂರ್ವಕ ಸ್ವಾಗತ ಎಂದು ಉಲ್ಲೇಖಿಸಿದ್ದಾರೆ.

ಇದಕ್ಕೂ ಮನ್ನ ದೆಹಲಿಯಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಕುಮಾರಸ್ವಾಮಿ, ಅಮಿತ್ ಶಾ, ನಡ್ಡಾ, ನಿಖಿಲ್ ಕುಮಾರಸ್ವಾಮಿ ಕುಪೇಂದ್ರ ರೆಡ್ಡಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಮಾತುಕತೆ ನಡೆಸಿದ್ದರು.

‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕರಾದ ಹೆಚ್​​ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದೆ. ಈ ಸಂದರ್ಭ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಇದ್ದರು. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನದ ಮೇಲೆ ತಮ್ಮ ನಂಬಿಕೆಯನ್ನು ವ್ಯಕ್ತಪಡಿಸಿರುವ ಜೆಡಿಎಸ್ ಮುಂದೆ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರಲು ನಿರ್ಧರಿಸಿದೆ. ಎನ್​ಡಿಎ ಕುಟುಂಬಕ್ಕೆ ಜೆಡಿಎಸ್​ ಅನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ’ ಎಂದು ಅಮಿತ್ ಶಾ ಪೋಸ್ಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಜೆಡಿಎಸ್ ಜತೆಗಿನ ಮೈತ್ರಿಯು ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲಿದೆ. ಬಲಿಷ್ಠ ಎನ್​ಡಿಎ ಮತ್ತು ಬಲಿಷ್ಠ ಭಾರತಕ್ಕೆ ದಾರಿ ಮಾಡಿಕೊಡಲಿದೆ ಎಂದು ಅಮಿತ್ ಶಾ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!