ಸತ್ಯಮೇವ ಜಯತೇ, ಸುಪ್ರೀಂಕೋರ್ಟ್‌ ತೀರ್ಪಿಗೆ ಸ್ವಾಗತ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ನೀಟ್ ಯುಜಿ (NEET UG) ಮರು ಪರೀಕ್ಷೆ ಇಲ್ಲ ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ವಾಗತಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳ ಪರೀಕ್ಷೆಯ ವಿಷಯಕ್ಕೆ ಬಂದಾಗ ಅದು ಉನ್ನತ ಶಿಕ್ಷಣ ಅಥವಾ ಉದ್ಯೋಗವೇ ಆಗಿರಲಿ ನಾವು ಯಾವುದೇ ರೀತಿಯ ಉಲ್ಲಂಘನೆಯನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದರು.

ಸತ್ಯಮೇವ ಜಯತೇ, ಸುಪ್ರೀಂಕೋರ್ಟ್‌ನ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ನಮ್ಮ ವಿದ್ಯಾರ್ಥಿಗಳು ಮತ್ತು ಅವರ ಭವಿಷ್ಯದ ಬಗ್ಗೆ ಸರ್ಕಾರ ಯೋಚಿಸುತ್ತದೆ. ನಾವು ಸುಪ್ರೀಂ ಕೋರ್ಟ್‌ಗೆ ಕೃತಜ್ಞರಾಗಿದ್ದೇವೆ. ಸಮಾಜದ ದುರ್ಬಲ ವರ್ಗಗಳು, ಎಸ್‌ಸಿ, ಎಸ್‌ಟಿ, ಗ್ರಾಮೀಣ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಮತ್ತೆ ನೀಟ್ ನಡೆಸದಿರಲು ನಿರ್ಧರಿಸಿದೆ ಎಂದು ಹೇಳಿದರು.

ಎರಡು ದಿನಗಳಲ್ಲಿ NTA NEET-UG ಅಂತಿಮ ಫಲಿತಾಂಶಗಳನ್ನು ಪ್ರಕಟಿಸುತ್ತದೆ ಎಂದು ಹೇಳಿದರು.

ಮೋದಿ ಸರ್ಕಾರವು ಅಕ್ರಮ ತಡೆಯುವುದಕ್ಕಾಗಿಯೇ ಕಟ್ಟುನಿಟ್ಟಾದ ಕಾನೂನನ್ನು ಜಾರಿಗೆ ತಂದಿದೆ. ಪಬ್ಲಿಕ್ ಎಕ್ಸಾಮಿನೇಷನ್ಸ್ (ಅನ್ಯಾಯ ಮಾರ್ಗಗಳ ತಡೆ) ಕಾಯಿದೆಯನ್ನು ಸುಪ್ರೀಂಕೋರ್ಟ್ ಮುಂದೆ ಪ್ರಸ್ತುತಪಡಿಸುತ್ತಾ, ನಮ್ಮ ಸರ್ಕಾರವು ಪಾರದರ್ಶಕ, ವಂಚನೆ-ಮುಕ್ತ ಮತ್ತು ಶೂನ್ಯ-ದೋಷಗಳ ಪರೀಕ್ಷಾ ವ್ಯವಸ್ಥೆಯನ್ನು ಹೊಂದಲು ಬದ್ಧವಾಗಿದೆ ಎಂದು ನಾವು ಭರವಸೆ ನೀಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಸಮಿತಿಯು ಕೂಡ ಎನ್‌ಟಿಎಯ ಸಂಪೂರ್ಣ ಪುನಶ್ಚೇತನಕ್ಕಾಗಿ ಸಮರ್ಪಿತವಾಗಿ ಕೆಲಸ ಮಾಡುತ್ತಿದೆ. ಸಮಿತಿಯು ತಜ್ಞರ ಅಭಿಪ್ರಾಯಗಳನ್ನು ಸಂಗ್ರಹಿಸಿ ವಿವಿಧ ಮಾದರಿಗಳನ್ನು ಅಧ್ಯಯನ ಮಾಡಿದೆ.ಅವರು ಶೀಘ್ರದಲ್ಲೇ ವರದಿಯನ್ನು ಸಲ್ಲಿಸಲಿದ್ದಾರೆ. ಎನ್‌ಟಿಎಯನ್ನು ದೋಷಮುಕ್ತಗೊಳಿಸಲು ನಾವು ಬದ್ಧರಾಗಿದ್ದೇವೆ, ಈ ಅಕ್ರಮಗಳಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ. ಸಿಬಿಐ ತನ್ನ ಕೆಲಸವನ್ನು ಮಾಡುತ್ತಿದೆ ಎಂದು ಸಚಿವರು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ದೇಶದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡುವರು,, ಸರಿಯಾಗಿ ಶಬ್ದ ಉಚ್ಛಾರಣೆ ಮಾಡಲು ಬರದಂತವರು ಶಿಕ್ಷಣ ಮಂತ್ರಿ ಆದರೆ,,ಆ ಕ್ಷೇತ್ರದ ಗತಿಯೇನು,, ಬಹುಶಃ ಎಲ್ಲರನ್ನೂ ಚೌಕಿದಾರ ಮಾಡುವರು

LEAVE A REPLY

Please enter your comment!
Please enter your name here

error: Content is protected !!