ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಳವಳ್ಳಿ :
ಪ್ರಸಿದ್ಧ ಪ್ರವಾಸಿಗರ ಪ್ರೇಕ್ಷಣೀಯ ಸ್ಥಳವಾದ ಮುತ್ತತ್ತಿ ಬಳಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಈಜಾಡಲು ಹೋಗಿ ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಚಿನ್ನಪ್ಪ ಗಾರ್ಡನ್ ನಿವಾಸಿ ಡೊಮಿನಿಕ್ ಕ್ಷೇವಿರ್ಯ ಪುತ್ರ ಪ್ರಾನ್ಸಿಸ್ ಕ್ಷೇವಿರ್ಯ (20) ಮೃತ ವ್ಯಕ್ತಿ.
ತನ್ನ ನಾಲ್ವರು ಸ್ನೇಹಿತರೊಡನೆ ಬೆಂಗಳೂರಿನಿಂದ ಮುತ್ತತ್ತಿಗೆ ಪ್ರವಾಸ ಬಂದಿದ್ದ ಪ್ರಾನ್ಸಿಸ್ ಈಜಲು ಹೋದಾಗ ಸುಳಿಗೆ ಸಿಲುಕಿ ಮೃತಪಟ್ಟಿದ್ದಾನೆ.
ವಿಷಯ ತಿಳಿದ ಸಬ್ ಇನ್ಸ್ ಪೆಕ್ಟರ್ ಮಾರುತಿ ತಮ್ಮಣ್ಣ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ನುರಿತ ಈಜುಗಾರರ ಸಹಾಯದಿಂದ ಶುಕ್ರವಾರ ಶವವನ್ನು ನದಿಯಿಂದ ಹೊರತೆಗೆದು ಶವಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ