October 19, 2026
Monday, October 19, 2026
spot_img

ಪಶ್ಚಿಮ ಏಷ್ಯಾ ಸಂಘರ್ಷ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ CCS ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಸನ್ನಿವೇಶ ಹಾಗೂ ದೇಶದ ಆರ್ಥಿಕತೆಯ ಮೇಲಾಗುವ ಪ್ರಭಾವವನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (CCS) ನಾಲ್ಕನೇ ವಿಶೇಷ ಸಭೆ ಜರುಗಿತು. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಸಮಾಲೋಚನೆಗಳ ಮುಂದುವರಿದ ಭಾಗವಾಗಿ ವಿವಿಧ ಸಚಿವಾಲಯಗಳ ಸಿದ್ಧತೆಗಳನ್ನು ಇಲ್ಲಿ ಪರಾಮರ್ಶಿಸಲಾಯಿತು.

ಇಂಧನ ಹಾಗೂ ರಸಗೊಬ್ಬರ ಪೂರೈಕೆ ಸ್ಥಿರತೆಗೆ ಕ್ರಮ

ಸಭೆಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ಟಿ.ವಿ. ಸೋಮನಾಥನ್ ಅವರು ಪ್ರಚಲಿತ ಭೂ-ರಾಜಕೀಯ ಪರಿಸ್ಥಿತಿಯ ಕುರಿತು ವಿವರಣೆ ನೀಡಿದರು. ದೇಶೀಯ ಇಂಧನ ಭದ್ರತೆಯನ್ನು ಕಾಯ್ದುಕೊಳ್ಳಲು ಎಲ್‌ಪಿಜಿ, ಎಲ್‌ಎನ್‌ಜಿ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಸಗೊಬ್ಬರಗಳ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಅವರು ವಿವರಿಸಿದರು.

ಭಾರತೀಯ ನಾಗರಿಕರು ಮತ್ತು ನಾವಿಕರ ಸುರಕ್ಷತೆಗೆ ಆದ್ಯತೆ

ಬದಲಾಗುತ್ತಿರುವ ಜಾಗತಿಕ ಬೆಳವಣಿಗೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಪ್ರಧಾನಿ ಸೂಚಿಸಿದರು. ವಿದೇಶದಲ್ಲಿರುವ ಭಾರತೀಯ ನಾಗರಿಕರು ಹಾಗೂ ನಾವಿಕರ ಕುಟುಂಬಗಳಿಗೆ ಸೂಕ್ತ ಮಾಹಿತಿ, ತುರ್ತು ನೆರವು ಮತ್ತು ಆಪ್ತಸಮಾಲೋಚನೆ ಒದಗಿಸಲು ವಿಶೇಷ ವ್ಯವಸ್ಥೆಯನ್ನು ಬಲಪಡಿಸುವಂತೆ ಅವರು ಸ್ಪಷ್ಟ ನಿರ್ದೇಶನ ನೀಡಿದರು.

Must Read