Sunday, April 18, 2021

Latest Posts

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ಟಿಎಂಸಿಯಿಂದ ಬಿಜೆಪಿಗೆ ಬಂದ ಶಾಸಕರು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಿದ್ಧತೆ ಜೋರಾಗಿ ನಡೆಯುತ್ತಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಪರ್ವ ಮುಂದುವರೆದಿದೆ.
ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ತೃಣ ಮೂಲ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಾದ ರವಿಂದ್ರ ನಾಥ್ ಭಟ್ಟಾಚಾರ್ಯ ಮತ್ತು ಸೋನಾಲಿ ಗುಹಾ ಅಸಮಾಧಾನಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮುಕುಲ್ ರಾಯ್ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ವರದಿಗಳು ಹೇಳಿವೆ.
ದಕ್ಷಿಣ 24 ಪರಗಣದ ಸತ್ ಗಾಚಿಯಾದಿಂದ ನಾಲ್ಕು ಬಾರಿ ಶಾಸಕರಾಗಿದ್ದ ಗುಹಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಆ ಕ್ಷೇತ್ರದಿಂದ ಮೋಹನ್ ಚಂದ್ರ ನಾಸ್ಕರ್ ಅವರಿಗೆ ಟಿಎಂಸಿ ಟಿಕೆಟ್ ಘೋಷಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss