Sunday, April 18, 2021

Latest Posts

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರ ಮೇಲೆ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರ ಮೇಲೆ ದಾಳಿ ನಡೆದಿದ್ದು, ಉತ್ತರ ಬಂಗಾಳದಲ್ಲಿ ಚುನಾವಣಾ ಪ್ರಚಾರ ಮುಗಿಸಿ ವಾಪಸ್ ಬರುತ್ತಿದ್ದ ಅವರ ಕಾರ್​ ಮೇಲೆ ಕೂಚ್ ಬೆಹರ್ ಎಂಬಲ್ಲಿ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಈ ಕುರಿತು ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಘೋಷ್ ಅವರು, ಟಿಎಂಸಿ ಗುಂಡಾಗಳು ನನ್ನ ಹಾಗೂ ನನ್ನ ಪಕ್ಷದ ಕಾರ್ಯಕರ್ತರ ಮೇಲೆ ದಾಳಿ ಮಾಡಿದ್ದಾರೆ. ಕಲ್ಲು ಇಟ್ಟಿಗೆಗಳಿಂದ ದಾಳಿ ಮಾಡಿದ್ದಾರೆ. ಕಾರ್ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಸುಮಾರು 100 ಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ಈ ಕೆಲಸ ಮಾಡಿದ್ದಾರೆ. ಅಲ್ಲದೇ ಪೆಟ್ರೋಲ್ ಬಾಂಬ್​ ಎಸೆಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ವಾತಾವರಣವನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾದರು ಎಂದು ಘೋಷ್ ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss