September 18, 2026
Friday, September 18, 2026
spot_img

ಬಂಗಾಳದಲ್ಲಿ ಕಚ್ಚಾ ಬಾಂಬ್‌ ದಾಳಿ ಬಳಿಕ ಇದೀಗ ಎರಡು ಗುಂಪುಗಳ ಮಾರಾಮಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ ಕಚ್ಚಾ ಬಾಂಬ್‌ ದಾಳಿಯಾಗಿದೆ. ಇದೀಗ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗುತ್ತಿದ್ದು, ಪರಿಸ್ಥಿತಿ ಕೈಮೀರಿದಂತಿದೆ.

ಟಿಎಂಸಿ ಹಾಗೂ ಎಜೆಯುಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ರಸ್ತೆಯಲ್ಲಿ ಎಲ್ಲೆಂದರಲ್ಲಿ ಗಾಡಿಗಳನ್ನು ಅಡ್ಡಾದಿಡ್ಡಿ ನಿಲ್ಲಿಸಿರುವ ಜನ ಏಕಾಏಕಿ ಕಿತ್ತಾಟ ನಡೆಸಿದ್ದಾರೆ. ಸದ್ಯ ಪೊಲೀಸರು ರಸ್ತೆಯಲ್ಲಿರುವ ಗಾಡಿಗಳನ್ನು ತೆರವು ಮಾಡಿದ್ದು, ಗಲಭೆಯನ್ನು ಕಂಟ್ರೋಲ್‌ಗೆ ತೆಗೆದುಕೊಂಡಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗೆ ವರದಿ ನೀಡಿ ಎಂದು ಚುನಾವಣಾ ಆಯೋಗ ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !