Thursday, June 30, 2022

Latest Posts

ಪ್ರಧಾನಿ ಮೋದಿಯವರನ್ನು ಭೇಟಿಯಾದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಮೂರನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಿದ್ದಾರೆ.
ನಿನ್ನೆಯಿಂದ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಇಂದು 4 ಗಂಟೆ ಸುಮಾರಿಗೆ ಪ್ರಧಾನಮಂತ್ರಿ ಮೋದಿಯವರನ್ನು ಭೇಟಿಯಾಗಿದ್ದಾರೆ. ಅದಕ್ಕೂ ಮೊದಲು ಕಾಂಗ್ರೆಸ್ ನಾಯಕ ಕಮಲನಾಥ್​, ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹಾಗೇ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ರನ್ನೂ ಅವರು ಭೇಟಿಯಾಗಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss