ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿದ್ದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಬೀರ್ ಭೂಮ್ ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಗಣಿಗಾರಿಕೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಕಲ್ಲಿದ್ದಲು ಪುಡಿ ಮಾಡುವ ವೇಳೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರಂತದಲ್ಲಿ ಏಳು ಜನರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.