ಪಶ್ಚಿಮ ಬಂಗಾಳದ ಕಚ್ಚಾ ಬಾಂಬ್ ಸ್ಫೋಟ: ಮಕ್ಕಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಮಾಲ್ಡಾದ ಮಾಣಿಕ್‌ಚಕ್ ಪ್ರದೇಶದಲ್ಲಿ ಮಕ್ಕಳು ಬಾಲ್ ಆಡುವಂತೆ ಆಟವಾಡಲು ಆರಂಭಿಸಿದಾಗ ಬಾಂಬ್ ಸ್ಫೋಟಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದಾಗ ಮೈದಾನದ ಮೂಲೆಯೊಂದರಲ್ಲಿ ಕೆಲವು ಕೆಲ ಕಿಡಿಗೇಡಿಗಳು ಬಾಂಬ್ ಗಳನ್ನು ಇಟ್ಟುಕೊಂಡಿದ್ದರು. ಅವರು ಸ್ಥಳದಲ್ಲಿದ್ದು ಮಕ್ಕಳನ್ನು ಹೆದರಿಸಿ ಓಡಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಹುಡುಗರು ಅವರ ಮಾತನ್ನು ಕೇಳದಿದ್ದಾಗ, ದುಷ್ಕರ್ಮಿಗಳು ಅವರ ಮೇಲೆ ಎರಡು ಬಾಂಬ್‌ಗಳನ್ನು ಎಸೆದಿದ್ದು, ಮಕ್ಕಳು ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!