ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ರಾಜ್ಯದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಮಾರ್ಚ್ 16ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇಮಾರ್ಚ್ 14ರಂದು ನಡೆಯುವ ಈ ಭಾರೀ ಸಾರ್ವಜನಿಕ ಸಭೆ ನಂತರ ಎರಡು ದಿನಗಳಲ್ಲಿ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳನ್ನು ಒಂದು ಅಥವಾ ಎರಡು ಹಂತಗಳಲ್ಲಿ ನಡೆಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಇದನ್ನೂ ಓದಿ:
ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸೇರಿದಂತೆ ಭಾರತೀಯ ಜನತಾ ಪಕ್ಷ, ಸಿಪಿಐ (ಎಂ) ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆ ಹೆಚ್ಚು ಹಂತಗಳಲ್ಲಿ ನಡೆಯಬಾರದು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ.
ಚುನಾವಣೆಗಳನ್ನು ಎರಡು ಹಂತಗಳಲ್ಲಿ ನಡೆಸಿದರೆ ಹಿಂಸಾಚಾರವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದೇ ವೇಳೆ ಮತದಾರರ ಪಟ್ಟಿಗೆ ಸಂಬಂಧಿಸಿದ ಹಲವು ಲಕ್ಷ ಪ್ರಕರಣಗಳು ಇನ್ನೂ ಪರಿಶೀಲನೆಗೆ ಬಾಕಿಯಿದ್ದು, ಅವುಗಳನ್ನು ಕಡಿಮೆ ಅವಧಿಯಲ್ಲಿ ವಿಲೇವಾರಿ ಮಾಡುವುದು ಅಧಿಕಾರಿಗಳಿಗೆ ಸವಾಲಾಗಬಹುದು ಎಂದು ತಿಳಿದುಬಂದಿದೆ.



