ಪಶ್ಚಿಮ ಬಂಗಾಳ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಎಂಬಲ್ಲಿ ಮಂಗಳವಾರ ಸಂಭವಿಸಿದ್ದ ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಸಿಐಡಿ ಅಧಿಕಾರಿಗಳು ಗುರುವಾರದಂದು ಒಡಿಶಾದಲ್ಲಿ ಅರೆಸ್ಟ್‌ ಮಾಡಿದ್ದಾರೆ.

ಈ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದರು. ಪಶ್ಚಿಮ ಬಂಗಾಳದ ಸಿಐಡಿ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದೆ. ಪ್ರಕರಣದ ಪ್ರಮುಖ ಆರೋಪಿ ಭಾನು ಬಾಗ್ ಅಕ್ರಮ ಪಟಾಕಿ ಘಟಕವನ್ನು ಹೊಂದಿದ್ದಾನೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರದ ಸ್ಫೋಟದಲ್ಲಿ ಗಾಯಗೊಂಡು ಒಡಿಶಾದ ನರ್ಸಿಂಗ್ ಹೋಂ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತನನ್ನು ಬಂಧಿಸಲಾಗಿದೆ ಎಂದು ಸಿಐಡಿ ಅಧಿಕಾರಿ ತಿಳಿಸಿದ್ದಾರೆ.

ಭಾನು ಬಾಗ್‌ಗೆ ಶೇಕಡಾ 70 ರಷ್ಟು ಸುಟ್ಟ ಗಾಯಗಳಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!