September 30, 2026
Wednesday, September 30, 2026
spot_img

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ್‌ ಬೋಸ್‌ ದಿಢೀರ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಮೂರುವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ ಆನಂದ ಬೋಸ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಲೋಕ ಭವನದ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯಪಾಲರ ರಾಜೀನಾಮೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೋಸ್ ಅವರು 2022 ರಿಂದ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Must Read