ಪಶ್ಚಿಮ ಬಂಗಾಳದ ರಾಜ್ಯ ಸಚಿವ ಸುಬ್ರತಾ ಸಹಾ ಹಠಾತ್ ನಿಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಪಶ್ಚಿಮ ಬಂಗಾಳದ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ತೋಟಗಾರಿಕೆ ಸಚಿವಾಲಯದ ರಾಜ್ಯ ಸಚಿವರು ಸುಬ್ರತಾ ಸಹಾ ಅವರು ಗುರುವಾರ ನಿಧನ ಹೊಂದಿದ್ದಾರೆ.

ಸುಬ್ರತಾ ಸಹಾ ಅವರು ಇಂದು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿನಲ್ಲಿ ಹಠಾತ್ ನಿಧನರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಸುಬ್ರತಾ ಸಹಾ ಅವರು ರಾಜ್ಯದ ಆಹಾರ ಸಂಸ್ಕರಣಾ ಇಲಾಖೆಯ ರಾಜ್ಯ ಸಚಿವರಾಗಿದ್ದು, ಮುರ್ಷಿದಾಬಾದ್‌ನ ಸಾಗರ್ದಿಘಿಯಿಂದ ಶಾಸಕರಾಗಿದ್ದಾರೆ.

ಬುಧವಾರ ರಾತ್ರಿ  ಅಸ್ವಸ್ಥಗೊಂಡಿದ್ದರಿಂದ ಅವರನ್ನು ಬೆರ್ಹಾಂಪೋರ್‌ನ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು.

ಸುಬ್ರತಾ ಸಹಾ ಅವರಿಗೆ 69 ವರ್ಷ ವಯಸ್ಸಾಗಿತ್ತು. ಇತ್ತೀಚೆಗಷ್ಟೇ ಸುಬ್ರತಾ ಅವರ ಪಿತ್ತಕೋಶದ ಶಸ್ತ್ರಚಿಕಿತ್ಕೆ ಕೋಲ್ಕತ್ತಾದಲ್ಲಿ ನಡೆದಿತ್ತು. ಬಳಿಕ ಚೇತರಿಸಿಕೊಂಡಿದ್ದ ಅವರು ಬುಧವಾರ ಬೆಳಗ್ಗೆ ಜಿಲ್ಲೆಗೆ ಮರಳಿದ್ದರು. ಆದರೆ ರಾತ್ರಿ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಬೆರ್ಹಾಂಪೋರ್‌ನ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ  ಹಠಾತ್ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!