ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸ ದಿಗಂತ ವರದಿ, ಮೈಸೂರು:
ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಆಗ್ರಹಿಸಿ ಜಾಗೋ ಮೈಸೂರು ಅಧ್ಯಕ್ಷ ಚೇತನ್ ಮಂಜುನಾಥ್ ಎಂಬುವರು ದೇಶದ ಪ್ರಧಾನಿ ನರೇಂದ್ರ ಮೋದಿ ಜಿ. ಅವರಿಗೆ ತಮ್ಮ ರಕ್ತದಿಂದ ಪತ್ರ ಬರೆದಿದ್ದಾರೆ.
ಮೇ 2 ರಂದು ಅಲ್ಲಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಂದ ದಿನದಿಂದ ಇಲ್ಲಿಯವರೆಗೂ, ತೃಣಮೂಲ ಕಾಂಗ್ರೆಸ್ಸಿನ ಕಾರ್ಯಕರ್ತರು ಮತ್ತು ಅಲ್ಲಿಯ ಮೂಲಭೂತ ವಾದಿಗಳು, 30 ಮಂದಿ ಬಿಜೆಪಿ ಕಾರ್ಯಕರ್ತರು ಮತ್ತು ಅಮಾಯಕ ಹಿಂದೂಗಳ ಭೀಕರ ಕೊಲೆಗಳನ್ನು ಮಾಡಿದ್ದಾರೆ. ಸುಮಾರು 7 ಸಾವಿರ ಹಿಂದೂ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಸುಮಾರು 15000 ಪ್ರಕರಣಗಳು ದಾಖಲಾಗಿವೆ. 1ಲಕ್ಷಕ್ಕೂ ಹೆಚ್ಚು ಮಂದಿ ಪ್ರಾಣ ಭಯದಿಂದ ಪಕ್ಕದ ರಾಜ್ಯಗಳಿಗೆ ವಲಸೆ ಹೋಗಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ಸಿನ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಅಲ್ಲದೆ ಈ ಎಲ್ಲಾ ಹಿಂಸೆಗಳಿಗೆ ಪರೋಕ್ಷ ಬೆಂಬಲವನ್ನು ನೀಡಿ ಕಣ್ಣುಮುಚ್ಚಿ ಕುಳಿತಿದೆ.
ಈ ಹಿನ್ನೆಲೆಯಲ್ಲಿ ಅಲ್ಲಿಯ ಅಮಾಯಕ ಹಿಂದೂಗಳು ಮತ್ತು ಬಿಜೆಪಿ ಕಾರ್ಯಕರ್ತರ ರಕ್ಷಣೆ ಮಾಡಲು ರಾಷ್ಟ್ರಪತಿ ಆಳ್ವಿಕೆ ಒಂದೇ ಮಾರ್ಗವಾಗಿದೆ
ಆದ್ದರಿಂದ ತಕ್ಷಣ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ತಮ್ಮ ರಕ್ತದಲ್ಲಿ ಮನವಿ ಪತ್ರ ಬರೆದಿದ್ದು, ಅದನ್ನು ಪ್ರಧಾನಮಂತ್ರಿಗಳ ಕಾರ್ಯಾಲಯದ ವಿಳಾಸಕ್ಕೆ ಪೋಸ್ಟ್ ಮಾಡಿದ್ದಾರೆ.