June 15, 2026
Monday, June 15, 2026
spot_img

ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭಾ ಚುನಾವಣೆ: ಮತದಾನ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಬೆಳಗ್ಗೆ ಏಳು ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಜನ ಬಿಸಿಲಾಗುವ ಮುನ್ನ ಮತಚಲಾವಣೆ ಮಾಡುತ್ತಿದ್ದಾರೆ.

ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಸ್ಟಾಲಿನ್‌ ಹಾಗೂ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ತಾರಾ ಎಂದು ಕಾದುನೋಡಬೇಕಿದೆ. ಇನ್ನು ಇದೇ ಮೊದಲ ಬಾರಿಗೆ ತಮಿಳು ನಟ ದಳಪತಿ ವಿಜಯ್‌ ಟಿವಿಕೆ ಪಕ್ಷವನ್ನು ಕಟ್ಟಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದ್ದಾರೆ.

ಉತ್ತರ ಬಂಗಾಳದ ಎಂಟು ಹಾಗೂ ದಕ್ಷಿಣ ಬಂಗಾಳದ ಮೂರು, ಜಂಗಲ್‌ಮಹಲ್‌ ಪ್ರದೇಶದ ಐದು ಸ್ಥಾನಗಳು ಸೇರಿದಂತೆ 16 ಜಿಲ್ಲೆಗಳ 152 ಸ್ಥಾನಗಳಲ್ಲಿ ಅಭೂತಪೂರ್ವ ಭದ್ರತೆಯ ನಡುವೆ ಗುರುವಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ.

ಬೆಂಗಳೂರಿನಲ್ಲಿರುವ ಸಾವಿರಾರುಜನ ಇದೀಗ ತಮಿಳುನಾಡಿನತ್ತ ಹೊರಟಿದ್ದಾರೆ. ನಿನ್ನೆ ಸಂಜೆಯೇ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !