ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ಟೀಮ್ ರೆಡಿ: ರೋವ್‌ಮನ್ ಪೊವೆಲ್‌ ನೂತನ ಸಾರಥಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಟಿ20 ವಿಶ್ವಕಪ್‌ಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ತಂಡದ ನಾಯಕತ್ವವನ್ನು ಸ್ಫೋಟಕ ಬ್ಯಾಟರ್ ರೋವ್‌ಮನ್ ಪೊವೆಲ್‌ಗೆ (Rovman Powell) ಹಸ್ತಾಂತರಿಸಲಾಗಿದೆ.

ಅಲ್ಲದೆ ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್‌ನಲ್ಲಿ ಯಾವ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೋ ಅವರೆಲ್ಲರಿಗೂ ಈ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಈ ಬಾರಿಯ ಟೂರ್ನಿಯನ್ನು ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಕಾರಣ ತಾಯ್ನಾಡಿನಲ್ಲಿ ದಾಖಲೆಯ ಮೂರನೇ ಬಾರಿಗೆ ಚಾಂಪಿಯನ್ ಪಟ್ಟದ ಮೇಲೆ ವಿಂಡೀಸ್ ಕಣ್ಣಿಟ್ಟಿದೆ.

ವೆಸ್ಟ್ ಇಂಡೀಸ್ ತಂಡ ಹೀಗಿದೆ: ರೋವ್ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್ (ಉಪನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರುದರ್ಫೋರ್ಡ್, ರೊಮಾರಿಯೋ ಶೆಫರ್ಡ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!