ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಪಾರಮ್ಯ ಸಾಧಿಸುವ ಮುಂದಾಗಿದ್ದು, ಗುರುವಾರ ಟ್ರಿನಿಡಾಡ್ ಟಾರೌಬಾದಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದೆ.
ಈ ಪಂದ್ಯದ ಮೂಲಕ ಐಪಿಎಲ್‌ನಲ್ಲಿ ಮಿಂಚಿದ ತಿಲಕ್ ವರ್ಮ ಹಾಗೂ ಮುಖೇಶ್ ಕುಮಾರ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ (ಪ್ಲೇಯಿಂಗ್ ಇಲೆವೆನ್): ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿ.ಕೀ), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್
ಭಾರತ (ಪ್ಲೇಯಿಂಗ್ ಇಲೆವೆನ್): ಶುಭಮನ್ ಗಿಲ್, ಇಶಾನ್ ಕಿಶನ್(ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್