ಸರಣಿ ಗೆಲುವಿನ ಆಸೆಯಲ್ಲಿ ವೆಸ್ಟ್ ಇಂಡೀಸ್: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್​ಮನ್ ಪೊವೆಲ್​ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯದ ಮೂಲಕ ಎಡಗೈ ಸ್ಪೋಟಕ ದಾಂಡಿಗ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಹಾಗೆಯೇ ಕುಲ್ದೀಪ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಇಶಾನ್ ಕಿಶನ್ ಹಾಗೂ ರವಿ ಬಿಷ್ಣೋಯ್ ತಂಡದಿಂದ ಹೊರಗುಳಿದಿದ್ದಾರೆ.

ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಐದು ಪಂದ್ಯಗಳ ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ವಿಂಡೀಸ್ ಪಡೆ ಗೆಲುವು ದಕ್ಕಿಸಿಕೊಂಡರೆ ಸರಣಿ ವಶಪಡಿಸಿಕೊಳ್ಳಬಹುದು.

ಇತ್ತ ಟೀಮ್ ಇಂಡಿಯಾ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಅಲ್ಲದೆ 3-2 ಅಂತರದಿಂದ ವೆಸ್ಟ್ ಇಂಡೀಸ್ ಅನ್ನು ಸೋಲಿಸಿ ಸರಣಿ ಗೆಲ್ಲಬಹುದು. ಹೀಗಾಗಿ 3ನೇ ಟಿ20 ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯವಾಗಿ ಮಾರ್ಪಟ್ಟಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!