ಹೊಸದಿಗಂತ ಡಿಜಿಟಲ್ ಡೆಸ್ಕ್:
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಬುಧವಾರದಿಂದ ಆರಂಭವಾಗಲಿದೆ. ಡೊಮಿನಿಕಾದ ರೊಸೇಯುನಲ್ಲಿನ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದೆ.
ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಹಾಗೂ ವಿಕೆಟ್ ಕೀಪರ್ ಇಶಾನ್ ಕಿಶನ್ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ .
ನಾಲ್ಕು ವರ್ಷಗಳ ಬಳಿಕ ಎರಡೂ ತಂಡಗಳು ಟೆಸ್ಟ್ನಲ್ಲಿ ಮುಖಾಮುಖಿಯಾಗಲಿವೆ. 2019ರಲ್ಲಿ ಕೊನೆಯ ಬಾರಿಗೆ ಎರಡೂ ತಂಡಗಳು ಮುಖಾಮುಖಿಯಾಗಿದ್ದವು.
ಭಾರತ (ಪ್ಲೇಯಿಂಗ್ ಇಲೆವೆನ್): ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್(ವಿ.ಕೀ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ವೆಸ್ಟ್ ಇಂಡೀಸ್ (ಪ್ಲೇಯಿಂಗ್ ಇಲೆವೆನ್): ಕ್ರೈಗ್ ಬ್ರಾಥ್ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿ.ಕೀ), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್