ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹರಾ ಮರಭೂಮಿಯಲ್ಲಿ ಭಾರೀ ಮಳೆಯಾಗುತ್ತಿದ್ದು 50 ವರ್ಷದ ನಂತರ ಕೆರೆಗಳು ಸಂಪೂರ್ಣ ಭರ್ತಿಯಾಗುತ್ತಿವೆ. ಉತ್ತರ ಆಫ್ರಿಕಾದಲ್ಲಿ ವಿಸ್ತಾರವಾಗಿ ಹರಡಿರುವ ಸಹರಾ ಮರಭೂಮಿಯಲ್ಲಿ ಈಗ ಮಳೆಯಾಗುತ್ತಿದೆ.
ಆಗ್ನೇಯ ಮೊರಾಕ್ಕೊದಲ್ಲಿ ಎರಡು ದಿನಗಳ ಧಾರಾಕಾರ ಮಳೆಯ ನಂತರ ಸಹರಾ ಮರುಭೂಮಿಯ ಕೆಲವು ಭಾಗಗಳಲ್ಲಿ ತೀವ್ರ ಪ್ರವಾಹ ಸೃಷ್ಟಿಯಾಗಿದೆ. ಕೇವಲ 24 ಗಂಟೆಗಳಲ್ಲಿ 100 ಮಿ.ಮೀ ಮಳೆಯಾಗಿತ್ತು ಎಂದು ಮೊರಾಕ್ಕೊದ ಹವಾಮಾನ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಝಗೋರಾ ಮತ್ತು ಟಾಟಾ ನಡುವಿನ ಕೆರೆ ಕಳೆದ 50 ವರ್ಷಗಳಿಂದ ಖಾಲಿಯಾಗಿತ್ತು. ಆದರೆ ಈಗ ಕೆರೆ ಭರ್ತಿಯಾಗಿರುವುದು ನಾಸಾ ಸೆರೆ ಹಿಡಿದ ಚಿತ್ರಗಳಿಂದ ದೃಢಪಟ್ಟಿದೆ.