ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್ರನ್ನು ತಡೆದಿದ್ದು ಯಾರು? ಸಂಸದರಾಗಿ ಡಿಕೆ ಶಿವಕುಮಾರ್ ಸಹೋದರನ ಕೊಡುಗೆ ಏನು? ಈಗ ಇದ್ದಕ್ಕಿದ್ದಂತೆಯೇ ದಿಢೀರ್ ಮಮತೆ ಬಂದಿರುವುದು ಯಾಕೆ ಎಂದು ಎಚ್ಡಿಕೆ ವ್ಯಂಗ್ಯ ಮಾಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದರು.