ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಬಹುನಿರೀಕ್ಷಿತ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿ ಕೇಂದ್ರ ಸರ್ಕಾರದ ಬಜೆಟ್ ಮೇಲೆ ಕರ್ನಾಟಕ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದೆ. ಯಾವೆಲ್ಲಾ ಎಕ್ಸ್‌ಪೆಕ್ಟೇಷನ್ಸ್? ಇಲ್ಲಿದೆ ಡೀಟೇಲ್ಸ್..
ಬೆಂಗಳೂರಲ್ಲಿ ಟ್ರಾಫಿಕ್ ನಿವಾರಣೆಗೆ ಟನಲ್ ರಸ್ತೆಗೆ ಅನುದಾನ
ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್
ಉತ್ತರ-ದಕ್ಷಿಣ 18.5 ಕಿ.ಮೀ ಟನಲ್ಗಾಗಿ ₹15 ಸಾವಿರ ಕೋಟಿ
ಕೆ.ಆರ್.ಪುರ ವೃತ್ತ – ನಾಯಂಡನಹಳ್ಳಿ ಜಂಕ್ಷನ್ ಟನಲ್ ರಸ್ತೆ
28.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹25 ಸಾವಿರ ಕೋಟಿ
ಮೆಟ್ರೋ ರೈಲು ಮಾರ್ಗಗಳಿಗೆ 5 ಕಾರಿಡಾರು ವಿಸ್ತರಣೆ ಗುರುತು
17 ಮೇಲ್ಸೇತುವೆ, ಬಫರ್ ವಲಯ ನಿರ್ಮಾಣಕ್ಕೆ ಅನುದಾನ
ಎಂಟು ಪಥದ 73.04 ಕಿ.ಮೀ ಬಿಸಿನೆಸ್ ಕಾರಿಡಾರ್ ಯೋಜನೆ
ಕಾವೇರಿ 5ನೇ ಹಂತದ ಕುಡಿಯುವ ನೀರಿನ ಪೂರೈಕೆ ಯೋಜನೆ
ಭದ್ರಾ ಮೇಲ್ದಂಡೆಗೆ ₹5,300 ಕೋಟಿ ಬಿಡುಗಡೆಗೆ ಅನುದಾನ
ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಅನುಮೋದನೆ
15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿದ ಅನುದಾನಕ್ಕೆ ಬೇಡಿಕೆ
ಅಂಗನವಾಡಿ, ಆಶಾ, ಅಡುಗೆ ಸಹಾಯಕಿಯರ ಗೌರವಧನ ಹೆಚ್ಚಳ
ಪ್ರಧಾನಮಂತ್ರಿ ಆವಾಸ್ ಯೋಜನೆ ನೆರವಿಗಾಗಿ ರಾಜ್ಯ ಸರ್ಕಾರದ ಮನವಿ
ವೃದ್ಧಾಪ್ಯ, ವಿಧವಾ ಮತ್ತು ವಿಕಲಚೇತನರ ಪಿಂಚಣಿ ಹೆಚ್ಚಿಸಬೇಕೆಂದು ಬೇಡಿಕೆ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹5,000 ಕೋಟಿ ಅನುದಾನಕ್ಕೆ ಮನವಿ
ಪಶ್ಚಿಮಘಟ್ಟ ಅಭಿವೃದ್ಧಿಗೆ 5 ವರ್ಷಗಳಿಗೆ ₹10,000 ಅನುದಾನಕ್ಕೆ ಬೇಡಿಕೆ