ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ 11 ಗಂಟೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನ್ನದಾತರು ಪ್ರತಿಭಟನೆ ನಡೆಸಲಿದ್ದಾರೆ.
ಬಜೆಟ್‌ಗೂ ಮುನ್ನವೇ ಬೆಂಗಳೂರು ಚಲೋಗೆ ರೈತರು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಯಲಿದೆ.
ಒಟ್ಟಾರೆ ಐದು ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ರೈತರ ಸಾಲಮನ್ನಾ, ರೈತರ ಹೆಣ್ಣುಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ, ನೀರಿಲ್ಲದೆ ಸಮಸ್ಯೆ ಅನುಭವಿಸುತ್ತಿರುವ ರೈತರಿಗೆ ಪರಿಹಾರ, ರೈತರ ಆಕಸ್ಮಿಕ ಸಾವಿಗೆ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ, ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಎಂಎಸ್‌ಪಿ ಖರೀದಿ ಕೇಂದ್ರ ಏರಿ ಮತ್ತಿತರ ಬೇಡಿಕೆಗಳನ್ನು ಸರ್ಕಾರದೆದುರು ರೈತರು ಇಟ್ಟಿದ್ದು, ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಲಿದ್ದಾರೆ.