Friday, March 5, 2021

Latest Posts

ಸಾವಿನ ಮನೆಯಲ್ಲೂ ರಾಜಕೀಯದ ಬೇಳೆ ಬೇಯಿಸುವವರಿಗೆ ಏನು ಹೇಳೋಣ?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ. ಸಾವಿನ ಮನೆಯಲ್ಲೂ ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ವಾಸ್ತವ ಅರಿಯದೇ ಮಾತನಾಡಬೇಡಿ. ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದು, ನಂತರ ಆ ಜಿಲೆಟಿನ್‌ನನ್ನು ಬೇರೆಡೆಗೆ ಸಾಗಿಸುವಾಗ ಸ್ಫೋಟ ಸಂಭವಿಸಿದೆ. ಅಕ್ರಮ ಗಣಿಗಾರಿಕೆಗೆ ನಾವು ಎಂದಿಗೂ ಬೆಂಬಲ ನೀಡುವುದಿಲ್ಲ. ಮೃತರ ಕುಟುಂಬಗಳಿಗೆ ಪರಿಹಾರ ದೊರಕಿಸುವುದು ನಮ್ಮ ಕರ್ತವ್ಯ. ನಾವು ಅದನ್ನು ಆದಷ್ಟು ಬೇಗ ಮಾಡುತ್ತೇವೆ ಎಂದಿದ್ದಾರೆ.
ಪರಿಸ್ಥಿತಿ ಹೇಗಿದೆ ಒಮ್ಮೆ ಅವಲೋಕಿಸಿ, ಈಷ್ಟು ಗಂಭೀರವಾದ ಪರಿಸ್ಥಿತಿಯಲ್ಲೂ ನಿಮಗೆ ನಿಮ್ಮ ರಾಜಕೀಯವೇ ಹೆಚ್ಚಾಗಿದೆ. ಸರ್ಕಾರದ ತೇಜೋವಧೆಗೆ ಸಿದ್ಧರಾಗಿ ಕುಳಿತಿದ್ದೀರಿ, ಇದು ಎಷ್ಟರ ಮಟ್ಟಿಗೆ ಸರಿ ನೀವೇ ಆಲೋಚಿಸಿ ಎಂದಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss