Saturday, December 10, 2022

Latest Posts

ಪಾಕ್ ಜೊತೆಗಿನ ಮಾತುಕತೆ ಕುರಿತು ಅಮಿತ್ ಶಾ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪಾಕಿಸ್ತಾನದೊಂದಿಗೆ ನಾವು ಮಾತನಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.
70 ವರ್ಷಗಳ ಕಾಲ ಆಳಿದವರು ಪಾಕಿಸ್ತಾನದೊಂದಿಗೆ ಮಾತನಾಡಿ ಎಂದು ಹೇಳುತ್ತಿದ್ದಾರೆ. ನಾವು ಪಾಕಿಸ್ತಾನದೊಂದಿಗೆ ಏಕೆ ಮಾತನಾಡಬೇಕು? ನಾವು ಮಾತನಾಡುವುದಿಲ್ಲ. ನಾವು ಬಾರಾಮುಲ್ಲಾದ ಜನರೊಂದಿಗೆ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರೊಂದಿಗೆ ಮಾತನಾಡುತ್ತೇವೆ ಎಂದು ಶಾ ಹೇಳಿದರು.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಅತ್ಯಂತ ಶಾಂತಿಯುತ ಸ್ಥಳವನ್ನಾಗಿ ಮಾಡಲು ನಾವು ಬಯಸುತ್ತೇವೆ ಎಂದು ಅವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!