7 ನೇ ವೇತನ ಆಯೋಗ ಶಿಫಾರಸು ಜಾರಿ ಕುರಿತು ಸಿಎಂ ಬೊಮ್ಮಾಯಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

7 ನೇ ವೇತನ ಜಾರಿ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ವೇತನ ಆಯೋಗದ ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳುತ್ತೇನೆ, ಮಾರ್ಚ್ ಒಳಗೆ ಮಧ್ಯಂತರ ವರದಿ ಕೊಡಲು ಸೂಚನೆ ನೀಡುತ್ತೇನೆಎಂದಿದ್ದಾರೆ.ಮಧ್ಯಂತರ ವರದಿಯ ಶಿಫಾರಸು ಜಾರಿಗೆ ಸರ್ಕಾರ ಬದ್ದವಾಗಿದೆ ಎಂದು ಮಾಹಿತಿ ನೀಡಿದರು.

ಏಳನೇ ಪರಿಷ್ಕ್ರೃತ ವೇತನ ಹಾಗೂ ಹಳೆ ಪಿಂಚಣಿ ಯೋಜನೆಗಾಗಿ ಸರ್ಕಾರಿ ನೌಕರರು ಪಟ್ಟು ಹಿಡಿದಿದ್ದು, ಫೆ.22 ರಿಂದ ಫೆ.28 ರವರೆಗೆ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ್ದಾರೆ. ಒಂದೇ ವೇಳೆ ಯೋಜನೆ ಜಾರಿಗೆ ತರದಿದ್ದರೆ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ನೌಕರರು ನಿರ್ಧರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!