ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ತಾನ ಮೀಡಿಯಾಗಳು ಇದೀಗ ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಅಷ್ಟಕ್ಕೂ ಏನದು ಹೇಳಿಕೆ, ಮೈಸೂರಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ. ಭದ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಹಿಂದೆ ಪುಲ್ವಾಮಾ ದಾಳಿಯಲ್ಲೂ ಘೋರ ದುರಂತ ಸಂಭವಿಸಿತ್ತು. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಆಗಿದೆ. ಈಗ ಯಾವುದೇ ಕ್ರಮ ತೆಗೆದುಕೊಂಡರೂ 26 ಜನ ವಾಪಸ್ ಬರುವುದಿಲ್ಲ ಎಂದಿದ್ದರು.
ಇದೀಗ ಈ ಹೇಳಿಕೆಯನ್ನು ಪಾಕ್ ಮಾಧ್ಯಮಗಳು ಬ್ರೇಕ್ಗಿಂಗ್ ನ್ಯೂಸ್ ಆಗಿ ಪ್ರಸಾರ ಮಾಡಿವೆ. ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
“ಪಾಕಿಸ್ತಾನ ರತ್ನ” ಸಿಎಂ @siddaramaiah ನವರೇ,
ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು… pic.twitter.com/OjcCkrEMtb
— R. Ashoka (@RAshokaBJP) April 27, 2025