Sunday, June 4, 2023

Latest Posts

ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಂದಿನ ಬಿಜೆಪಿ ಸರ್ಕಾರ ಸಿದ್ಧಪಡಿಸಲಾಗಿರುವ ಪಠ್ಯ ಪುಸ್ತಕದ (Text Book) ಪರಿಷ್ಕರಣೆ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಗಳವಾರ ತಿಳಿಸಿದರು.
ವಿಧಾನಸೌಧದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಠ್ಯ ಪುಸ್ತಕ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಬಿಜೆಪಿ ಆಡಳಿತದ ಅವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಆಡಳಿತದಲ್ಲಿ ಸುಧಾರಣೆ, ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳ ಸಹಕಾರ ಕೋರಿದ್ದೇವೆ. ಉತ್ತಮ ಆಡಳಿತ ನೀಡಲು ತ್ವರಿತವಾಗಿ ಕಡತ ವಿಲೇವಾರಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿಗದಿತ ಸಮಯ ಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪಠ್ಯಪುಸ್ತಕ ರಚನಾ ಸಮಿತಿ ಮಾಡಲಾಗಿತ್ತು. ಆ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. ಬರಗೂರು ರಾಮಚಂದ್ರಪ್ಪ ಸಮಿತಿಯು ಪಠ್ಯ ಪರಿಷ್ಕರಣೆ ವೇಳೆ ಕೆಲವೊಂದು ಲೋಪ ದೋಷಗಳನ್ನು ಮಾಡಿದೆ ಎಂದು ನಂತರ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಆಕ್ಷೇಪಿಸಿತ್ತು. ಅಲ್ಲದೆ, ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!