Tuesday, March 21, 2023

Latest Posts

ಮೋದಿ ಕರ್ನಾಟಕಕ್ಕೆ ಏನ್‌ ಕೊಟ್ರು?- ಇವತ್ತಿನ ಭೇಟಿಯಲ್ಲೇ ಇದೆ ಉತ್ತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಬಹುನಿರೀಕ್ಷಿತ ಬೆಂಗಳೂರು – ಮೈಸೂರು ವೇಗದ ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇದರ ಉದ್ಘಾಟನೆಯ ಜೊತೆಗೆ ಹಲವು ಅಬಿವೃದ್ಧಿ ಕಾರ್ಯಕ್ರಮಗಳಿಗೂ ಮೋದಿ ಚಾಲನೆ ನೀಡಲಿದ್ದಾರೆ. ಅವರ ಈ ಭೇಟಿಯು ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ಆರಂಭ ನೀಡಲಿದೆ. ಇಂದು ಚಾಲನೆಗೊಳ್ಳಲಿರುವ ಕೆಲ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ.

1.ಬೆಂಗಳೂರು-ನಿಡಘಟ್ಟ-ಮೈಸೂರು ಎಕ್ಸ್‌ಪ್ರೆಸ್‌ ವೇ- 10 ಲೇನ್‌ ವೇಗದ ಹೆದ್ದಾರಿ ಇದಾಗಿದ್ದು 8,480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣದ ಸಮಯವನ್ನು 180 ನಿಮಿಷಗಳಿಂದ 75 ರಿಂದ 90 ನಿಮಿಷಗಳಿಗೆ ಕಡಿಮೆ ಮಾಡುತ್ತದೆ.

2. ಮೈಸೂರು ಕುಶಾಲನಗರ ಹೆದ್ದಾರಿ : ಇದನ್ನು 4,130 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು 92 ಕಿಮೀ ಉದ್ದವಾಗಿದೆ. ಇದು ಪ್ರಯಾಣದ ಸಮಯವನ್ನು 5 ಗಂಟೆಗಳಿಂದ ಎರಡೂವರೆ ಗಂಟೆಗಳವರೆಗೆ ಕಡಿಮೆ ಮಾಡುತ್ತದೆ.

3. ಐಐಟಿ ಧಾರವಾಡ: 850 ಕೋಟಿ ರೂ.ವೆಚ್ಚದಲ್ಲಿ ವಿದ್ಯಾನಗರಿ ಧಾರವಾಡದಲ್ಲಿ ದೇಶದ ಪ್ರತಿಷ್ಟಿತ ತಾಂತ್ರಿಕ ಶಿಕ್ಷಣ ಸಂಸ್ಥೆ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ತಲೆ ಎತ್ತಲಿದೆ.

4. ವಿಶ್ವದ ಅತಿ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್: ಹುಬ್ಬಳ್ಳಿ ಶ್ರೀ ಸಿದ್ಧಾರೂಢ ರೈಲು ನಿಲ್ದಾಣದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪ್ಲಾಟ್‌ಫಾರ್ಮ್ ನಿರ್ಮಿಸಲಾಗಿದ್ದು ಇದು ವಿಶ್ವದಲ್ಲಿಯೇ ಅತಿ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್ ಎನಿಸಿದೆ.

5. 530 ಕೋಟಿ ರೂ. ಮೌಲ್ಯದ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಯೋಜನೆಗಳು ಜಾರಿಯಾಗಲಿವೆ

6. 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಯೋಜಿಸಲ್ಪಟ್ಟಿರುವ ತುಪ್ಪರಿಹಳ್ಳ ಪ್ರವಾಹ ಹಾನಿ ನಿಯಂತ್ರಣ ಯೋಜನೆಯೂ ಆರಂಭವಾಗಲಿದೆ.

7. ಹೊಸಪೇಟೆ ಹುಬ್ಬಳ್ಳಿ ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು 530 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸಪೇಟೆ ನಿಲ್ದಾಣವನ್ನು ಪುನರಾಭಿವೃದ್ಧಿ ಮಾಡಲಾಗಿದೆ.

8. ಬೆಂಗಳೂರಿನಲ್ಲಿ ಬರೋಬ್ಬರಿ 250ಕೋಟಿ ರೂ. ವೆಚ್ಚದಲ್ಲಿ ಹೃದ್ರೋಗ ಚಿಕಿತ್ಸೆಗೆಂದೇ ಸ್ಥಾಪಿಸಲ್ಪಟ್ಟ ಜಯದೇವ ಆಸ್ಪತ್ರೆಯೂ ಲೋಕಾರ್ಪಣೆಯಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!