IND vs NZ TEST | ಟಾಸ್‌ ಗೆದ್ದ ನ್ಯೂಝಿಲೆಂಡ್‌ ಆಯ್ಕೆ ಮಾಡಿದ್ದು ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತ- ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ನಾಯಕ ಟಾಮ್ ಲ್ಯಾಥಮ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

ಈ ಪಂದ್ಯಕ್ಕಾಗಿ ಭಾರತ ತಂಡದ ಆಡುವ ಬಳಗದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭ್​ಮನ್ ಗಿಲ್ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಗಿದೆ. ಇನ್ನು ಮೊಹಮ್ಮದ್ ಸಿರಾಜ್ ಬದಲಿಗೆ ಈ ಬಾರಿ ಆಕಾಶ್ ದೀಪ್ ಹಾಗೂ ಕುಲ್ದೀಪ್ ಯಾದವ್ ಬದಲಿಗೆ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ನೀಡಲಾಗಿದೆ.

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷರ್ಭ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಆಕಾಶ್ ದೀಪ್ ಟೀಂನಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!